ಮಂಗಳೂರು: ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಮೃತರನ್ನು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಎಂದು ಗುರುತಿಸಲಾಗಿದೆ. ಓಂಶ್ರೀ ಅವರು ದ.ಕ. ಜಿಲ್ಲಾ ಎನ್ ಎಸ್ ಯು ಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದು, ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದರು ಎನ್ನಲಾಗಿದೆ.
ನಡುರಾತ್ರಿ 2.30ರ ವೇಳೆಗೆ ಘಟನೆ ನಡೆದಿದೆ. ರಾ.ಹೆ. 66ರ ಜಪ್ಪಿನಮೊಗರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಎದುರಲ್ಲೇ ಅಪಘಾತ ನಡೆದಿದೆ. ಐವರು ಯುವಕರಿದ್ದ ಕಾರು ತಲಪಾಡಿಯಿಂದ ಮಂಗಳೂರಿನ ಕಡೆಗೆ ಅತಿ ವೇಗದಿಂದ ಧಾವಿಸುತ್ತಿತ್ತು. ಅಪಘಾತದ ತೀವ್ರತೆ ಎಷ್ಟು ಭೀಕರವಾಗಿತ್ತೆಂದರೆ, ಕಾರು ಸಂಪೂರ್ಣ ಪುಡಿಯಾಗಿದ್ದು ಇಂಜಿನ್ ಭಾಗವೇ ಹೊರಕ್ಕೆ ಬಂದಿದ್ದು ಎರ್ ಬ್ಯಾಗ್ ಚಿಂದಿಯಾಗಿದೆ.
ತಲಪಾಡಿ ಕಡೆಯಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಟಲಿಯ ಪ್ರಜೆ ಸಹಿತ ಮೂವರಿಗೆ ಗಾಯಗಳಾಗಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 Greycrust. All Rights Reserved.
Design by GreyCrust Solutions